ಹಾಸನ: ಶಂಕಿತ ಡೆಂಗ್ಯೂ ಸೋಂಕಿಗೆ ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಬಾಲಕನೊಬ್ಬ ಬಲಿಯಾಗಿದ್ದಾನೆ.
ನಂದಿನಿ ಸೋಮಶೇಖರ್ ದಂಪತಿ ಪುತ್ರ ಚಿರಂತ್‌ಗೌಡ (6) ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬಾಲಕ ಹಳ್ಳಿಮೈಸೂರು ಶಾಲೆಯ ಯುಕೆಜಿ ವ್ಯಾಸಂಗ ಮಾಡುತ್ತಿದ್ದನು.
ಕಳೆದ ಮಂಗಳವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕ ಕೆ.ಆರ್.ನಗರ ತಾಲೂಕಿನ ಭೇರ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಗುಣವಾಗದ ಹಿನ್ನೆಲೆಯಲ್ಲಿ ಕೆ.ಆರ್.ನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆದರೆ ಚೇತರಿಕೆ ಕಾಣದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.