ಚನ್ನರಾಯಪಟ್ಟಣ; ಕೋರ್ಟ್ ವಿಚಾರಣೆಗೆ ಆಗಮಿಸುತ್ತಿದ್ದವರ ಮೇಲೆ ಸಿನಿಮೀಯ ಶೈಲಿಯ ದಾಳಿ, ಹಲ್ಲೆಯಿಂದ ಇಬ್ಬರಿಗೆ ಗಂಭೀರ ಗಾಯ

ಚನ್ನರಾಯಪಟ್ಟಣ, ಡಿಸೆಂಬರ್ 30: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪಟ್ಟಣದ ಕೋರ್ಟ್ ಎದುರಿನ ರಸ್ತೆಯಲ್ಲಿ ವಿಚಾರಣೆಗೆ ಹಾಜರಾಗಲು ಆಗಮಿಸುತ್ತಿದ್ದ ಕುಟುಂಬವೊಂದರ ಮೇಲೆಸಿ ನಿಮೀಯ ಶೈಲಿಯಲ್ಲಿ ದಾಳಿಯ ಘಟನೆ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿ ಗ್ರಾಮದ ಕುಟುಂಬವು ಕೌಟುಂಬಿಕ ಕಲಹದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ದಿನೇಶ್ ಎಂಬಾತನಿಂದ ಹಲ್ಲೆ ಆರೋಪ:
ಅನೇಕ ಅಪರಿಚಿತ ಕೀಡಿಗೇಡಿಗಳ ಗುಂಪು ಕುಟುಂಬದ ಮೇಲೆ ದಾಳಿ ಮಾಡಿದ್ದು, ಈ ವೇಳೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ;
ಘಟನೆಯ ಕುರಿತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆ
ಈ ದಾಳಿಗೆ ಕೌಟುಂಬಿಕ ಕಲಹ ಕಾರಣವಾಗಿದ್ದು, ಸಂಬಂಧಿತ ಪ್ರಕರಣದ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಘಟನೆ ಸಂಬಂಧ ತನಿಖೆ ಮುಂದುವರಿದಿದ್ದು, ಹಲ್ಲೆಕೋರರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.