ಹಾಸನ:ಜಮೀನಿನಲ್ಲಿ ಕಳೆ ಕೀಳುತ್ತಿದ್ದ ರೈತ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆ ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ.
ಚಂದ್ರಮ್ಮ (60) ಮೃತ ಮಹಿಳೆ. ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಅವರ ಬಲಗೈಗೆ ಹಾವು ಕಚ್ಚಿದೆ. ಕೂಡಲೇ ಅವರನ್ನು ಸ್ಥಳೀಯರು ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಗೆ ಕರೆ ತಂದರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಚಂದ್ರಮ್ಮ ಅವರಿಗೆ ಕಚ್ಚಿದ ಹಾವನ್ನು ಸ್ಥಳೀಯ ಉರಗತಜ್ಞರೊಬ್ಬರು ಸೆರೆ ಹಿಡಿದು ಕಾಡಿಗೆ ಬಿಟ್ಟರು. ಹಳ್ಳಿಮೈಸೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.