ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕ

ಹಾಸನ: ನಗರದ ಲಾಡ್ಜ್‌ ಒಂದರಲ್ಲಿ ನೇಣು ಬಿಗಿದುಕೊಂಡು ಸರ್ಕಾರಿ ಶಾಲೆ ಶಿಕ್ಷಕ ಆತ್ಮಹತ್ಯೆ ಮಾಡಿದ್ದಾರೆ.

ಬೇಲೂರು ತಾಲ್ಲೂಕಿನ, ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರಂಗಸ್ವಾಮಿ (57) ಆತ್ಮಹತ್ಯೆಗೆ ಶರಣಾದ ಶಿಕ್ಷಕ.

ಹಾಸನ ನಗರದ ಬಿ.ಎಂ.ರಸ್ತೆಯಲ್ಲಿರುವ ಗೋಕುಲ್‌ಲಾಡ್ಜ್‌ನಲ್ಲಿ ನಿನ್ನೆ ಕೊಠಡಿ ಬಾಡಿಗೆ ಪಡೆದು ತಂಗಿದ್ದ ಆತ ನೇಣು ಬಿಗಿದುಕೊಂಡು ಮೃತಪಟ್ಟಿದ್ದು ಇಂದು ಹೋಟೆಲ್ ಸಿಬ್ಬಂದಿ ಗ್ರಾಹಕ ಬಾಗಿಲು ತೆರೆಯದಿರುವುದನ್ನು ಗಮನಿಸಿ ಪರಿಶೀಲಿಸಿದ್ದರಿಂದ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.