ಬೇಲೂರು: ಟಿಪ್ಪರ್ ಲಾರಿ ಡಿಕ್ಕಿ- ಪಾದಚಾರಿ ಗ್ರಾಪಂ ಅಧ್ಯಕ್ಷೆ ಸಾವು

ಹಾಸನ, ಫೆಬ್ರವರಿ 19: ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದುಕೊಂಡು‌ ಹೋಗುತ್ತಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬರು ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದರಿಂದ ಅವರು  ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಲ್ಲಿಗಮ್ಮ
ಮಲ್ಲಿಗಮ್ಮ

ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗಮ್ಮ (58) ಮೃತರು.

ಅಪಘಾತ ಎಸಗಿದ ಟಿಪ್ಪರ್

ಮಲ್ಲಿಗಮ್ಮ ಅವರು ಬ್ಯಾಂಕ್ ಕಾರ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ, ಹಿಂದಿನಿಂದ ಬಂದ KA-46-8651 ನಂಬರ್‌ನ ಟಿಪ್ಪರ್ ಲಾರಿ ಅವರಿಗೆ ಡಿಕ್ಕಿ ಹೊಡೆದು ತೀವ್ರ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಘಟನೆ ನಡೆದ ತಕ್ಷಣ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಬೇಲೂರು ಪಟ್ಟಣದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳಕ್ಕೆ ಬೇಲೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಅಪಘಾತ ಎಸಗಿದ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ.