ಹಾಸನ: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ವಾಹನಗಳು ಹಳ್ಳಕ್ಕೆ ಬಿದ್ದು ಒಂದು ಮಗು ಸೇರಿ ನಾಲ್ವರು ಗಾಯಗೊಂಡ ಘಟನೆ ನಗರ ಹೊರವಲಯದ ಕಂದಲಿ ಸಮೀಪ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಗು ಹಾಗೂ ಇನ್ನಿಬ್ಬರು ಕಾರು ಹಳ್ಳಕ್ಕೆ ಬಿದ್ದಿದ್ದರಿಂದ ಗಾಯಗೊಂಡಿದ್ದಾರೆ. ಡಿಕ್ಕಿ ರಭಸಕ್ಕೆ ಹಳ್ಳಕ್ಕೆ ಬಿದ್ದು ಹೊಂಡದಲ್ಲಿ ಬೆಳೆದಿದ್ದ ಗಿಡದಲ್ಲಿ ಮುಚ್ಚಿಹೋದ ಬೈಕ್ ನ ಸವಾರನಿಗೂ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದು, ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.