ಟಾಟಾ ಏಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ಸಾವು. ಟಾಟಾ ಏಸ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

ಹಾಸನ: ಟಾಟಾ ಏಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಟಾಟಾ ಎಸಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಗರೆ ಸಮೀಪ ನಡೆದಿದೆ.

ಮಲ್ಲಿಕಾರ್ಜುನಪುರ ಗ್ರಾಮದ ದರ್ಶನ್ (22) ಮೃತ ಯುವಕ. ಅತಿ ವೇಗದಿಂದ ಬಂದ ಟಾಟಾ ಎಸಿ ವಾಹನ ಚಾಲಕನ ನಿಯಂತ್ರಣ ತಪ್ಪಿ KA-46 J-5637 ನಂಬರ್‌ನ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.