ಹಾಸನ, ಮಾರ್ಚ್ 18, 2025: ಆಲೂರು ತಾಲ್ಲೂಕಿನ ಪಾಳ್ಯ ಬಳಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
ವಿಡಿಯೋ ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ
https://www.instagram.com/reel/DHWN0SES6RO/?igsh=MThvN3dhZHV4cXV3Ng==
ಈ ಘಟನೆಯಲ್ಲಿ ಎರಡೂ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ ಐವರು ಗಾಯಗೊಂಡಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ KA-20-MC-3056 ನಂಬರ್‌ನ ಹೋಂಡಾ ಸಿಟಿ ಕಾರು ಮತ್ತು KA-04-MY-6084 ನಂಬರ್‌ನ ಕಿಯಾ ಕಾರುಗಳು ಈ ಅಪಘಾತಕ್ಕೆ ಒಳಗಾಗಿವೆ.
ವೇಗವಾಗಿ ಬಂದು ಓವರ್‌ಟೇಕ್ ಮಾಡುವ ಯತ್ನದಲ್ಲಿ ಈ ಡಿಕ್ಕಿ ಸಂಭವಿಸಿದ್ದು, ಎರಡೂ ಕಾರುಗಳು ರಸ್ತೆ ಬದಿಗೆ ಉರುಳಿ ಬಿದ್ದಿವೆ.ಗಾಯಗೊಂಡ ಐವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಆಲೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು