ಹೊಳೆನರಸೀಪುರ; ಅರಣ್ಯ ಇಲಾಖೆ ಬೋನಿಗೆ ಬಿತ್ತು ರೈತರ ನಿದ್ದೆಗೆಡಿಸಿದ್ದ ಚಿರತೆ leopard

ಹಾಸನ:ಹೊಳೆನರಸೀಪುರ ತಾಲ್ಲೂಕಿನ, ಮಾವನೂರು ಗ್ರಾಮದಲ್ಲಿ ಮೂರ್ನಾಲ್ಕು ತಿಂಗಳುಗಳಿಂದ ರೈತರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

2.5 ವರ್ಷದ ಹೆಣ್ಣು ಚಿರತೆ ಕಳೆದ ಮೂರು-ನಾಲ್ಕು ತಿಂಗಳಿಂದ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದು, ಕುರಿ, ಸಾಕು ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕುತ್ತಿತ್ತು. ಕೆಲವೊಮ್ಮೆ ಹಗಲು ವೇಳೆ ರೈತರ ಜಮೀನಿನಲ್ಲಿ ಕಾಣಿಸಿಕೊಂಡು ಆತಂಕ ಹೆಚ್ಚಿಸಿತ್ತು.

ಗ್ರಾಮಸ್ಥರ ಒತ್ತಾಯಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ: ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು. ಅದಕ್ಕೆ ಸ್ಪಂದಿಸಿದ ಅಧಿಕಾರಿಗಳು ಬೋನು ಇಟ್ಟು, ಅದರೊಳಗೆ ನಾಯಿಯನ್ನು ಕಟ್ಟಿ ಚಿರತೆಯನ್ನು ಸೆರೆಹಿಡಿಯಲು ಸಿದ್ಧತೆ ನಡೆಸಿದ್ದರು.

ಬೋನಿಗೆ ಬಿದ್ದ ಚಿರತೆ;
ಚಿರತೆ ಬೋನಿನೊಳಗೆ ಬಿಟ್ಟಿದ್ದ ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿಗೆ ಸಿಕ್ಕಿಬಿದ್ದಿತು. ಈ ಮೂಲಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟರು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ರಕ್ಷಿಸಿ ದಟ್ಟ ಅರಣ್ಯದೊಳಗೆ ಬಿಡಲಿದ್ದಾರೆ.