ಹಾಸನ: ಸಕಲೇಶಪುರ ತಾಲ್ಲೂಕಿನ ಗುಳಗಳಲೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ನಡೆದಿದೆ. ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಮಿನಿ ಟ್ರಕ್ ಅತಿ ವೇಗವಾಗಿ ಬಂದು ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದು, ಡಿವೈಡರ್ ದಾಟಿ ರಸ್ತೆ ಬದಿಯ ಅಂಗಡಿಗೆ ಗುದ್ದಿದೆ.
ಬೈಕ್ ಸವಾರ ಕೆಂದನಮನೆ ಗ್ರಾಮದ ನಿವಾಸಿ ಅವಿನಾಶ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಮೊಹಮ್ಮದ್ ಅವರಿಗೆ ಸೇರಿರುವ ರಸ್ತೆ ಬದಿಯ ಅಂಗಡಿಗೆ ದೊಡ್ಡ ಮಟ್ಟದಲ್ಲಿ ಹಾನಿಯಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.