ಹಾಸನ: ನಗರ ಹೊರವಲಯದ ಬಿ.ಕಾಟೀಹಳ್ಳಿಯಲ್ಲಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿಯಾಗಿ ತಾಯಿ- ಮಗ ಸ್ಥಳದಲ್ಲೇ ದಾರುಣ ಸಾವಿಗೀಡಾಗಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಜನರು ನಾಲ್ಕು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಸತೀಶ್ (42), ಕಮಲಮ್ಮ (71) ಮೃತರು ಬೈಕ್‌ಗೆ ಡಿಕ್ಕಿ ಹೊಡೆದು ಕ್ಯಾಂಟರ್ ಕೂಡ ಪಲ್ಟಿಯಾಗಿದೆ.
ಸತೀಶ್ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು.
ಅಪಘಾತದಿಂದ ಕೆರಳಿದ ಸ್ಥಳೀಯರು ನಿಲ್ಲಿಸಿದ್ದ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಿಂದ ಮೂರು ಲಾರಿಗಳ ಗಾಜುಗಳು ಪುಡಿ ಪುಡಿಯಾಗಿವೆ.
ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು,
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.