ಸಕಲೇಶಪುರ ಪೊಲೀಸ್ ಕ್ವಾಟರ್ಸ್‌ನಲ್ಲಿ ನೇಣಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್

ಪತ್ನಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಿಂದ ಮನನೊಂದು ನೇಣಿಗೆ ಶರಣು ಶಂಕೆ

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ಪಟ್ಟಣದ, ಪೊಲೀಸ್ ಕ್ವಾಟರ್ಸ್‌ನ ವಿಶ್ರಾಂತಿ‌ ಕೊಠಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಸೋಮಶೇಖರ್ (39) ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್.

ಜಿಲ್ಲಾ ಸಶಸ್ತ್ರಪಡೆಗೆ ನೇಮಕಗೊಂಡಿದ್ದ ಅವರು ಸಕಲೇಶಪುರ ಠಾಣೆ ವ್ಯಾಪ್ತಿಯ 112 ತುರ್ತು ಸೇವೆ ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ ವಿರುದ್ಧ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆತನ ಪತ್ನಿ ಕೌಟುಂಬಿಕ ದೌರ್ಜನ್ಯದ ಆರೋಪ ಮಾಡಿ ಡಿವೈ‌ಎಸ್‌ಪಿ‌ಗೆ ದೂರು ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.