ಹಾಸನ: ಖಾಸಗಿ ಶಾಲೆಯ ಬಸ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೇಲೂರು ತಾಲ್ಲೂಕಿನ, ನಿಡಗೋಡು ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ.
ನಾಗೇಂದ್ರ (51) ಸಾವನ್ನಪ್ಪಿದ್ದ ವ್ಯಕ್ತಿ. ಮಕ್ಕಳನ್ನು ಶಾಲೆಯಿಂದ ಮನೆಗೆ ಬಿಡಲು ತೆರಳುತ್ತಿದ್ದ ಖಾಸಗಿ ಶಾಲಾ ಬಸ್ ಬೇಲೂರಿನ ಚನ್ನಕೇಶವನಗದ ಕಡೆಯಿಂದ ನಾಗೇಂದ್ರ ಅವರು ಚಲಾಯಿಸಿಕೊಂಡು ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.