ಆಲೂರು ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕ ನೇಣಿಗೆ ಶರಣು

ತಾಯಿ ಮರಣದ ನಂತರ ಅನುಕಂಪದ ಆಧಾರದಲ್ಲಿ ನೌಕರಿ ಪಡೆದಿದ್ದ ಅರುಣ್

ಹಾಸನ: ಆಲೂರು ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಗಳವಾರ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅರುಣ್ (28)ಹಾಸನದ ವಿಜಯನಗರ ಬಡಾವಣೆಯಲ್ಲಿನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆಲೂರು ತಾಲ್ಲೂಕು ಕಚೇರಿಯಲ್ಲಿ ಎಸ್‌ಡಿಎ ಆಗಿದ್ದ ಬೇಲೂರು ಮೂಲದ ಅರುಣ್, ವಿಜಯನಗರ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಸರ್ಕಾರಿ ನೌಕರಿಯಲ್ಲಿದ್ದ ಅವರ ತಾಯಿ ಮರಣದ ನಂತರ ಅನುಕಂಪದ ಆಧಾರದಲ್ಲಿ ಅರುಣ್‌ಗೆ ಕೆಲಸ ದೊರಕಿತ್ತು. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.