ಹಾಸನ: ಭಾರಿ ಮಳೆ- ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮೀನು ಸಾಗಣೆ ಲಾರಿ ಪಲ್ಟಿ

ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿ ಚಾಲಕನಿಗೆ ಗಾಯವಾಗಿದೆ. 

ಹಾಸನ, ಮೇ 25, 2025: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಳೆಯ ಪರಿಣಾಮವಾಗಿ ಸಕಲೇಶಪುರ ತಾಲ್ಲೂಕಿನ ರಾಟೆ ಮನೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗಂಭೀರ ಅಪಘಾತವೊಂದು ಸಂಭವಿಸಿದೆ.

ವಿಡಿಯೋ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:

https://www.instagram.com/reel/DKD5UWRpxWT/?igsh=MWkzNjg5eThyZmt1Zw==

ಮಂಗಳೂರಿನಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ KA-02-AB-4796 ನಂಬರ್‌ನ ಲಾರಿಯೊಂದು ಭಾರೀ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವೀಕೆಂಡ್‌ನಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರೂ, ದೊಡ್ಡ ಅನಾಹುತವೊಂದು ತಪ್ಪಿದೆ.

ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾರೀ ಮಳೆಯಿಂದಾಗಿ ರಸ್ತೆಗಳು ಕಾಣದಿರುವುದು ಮತ್ತು ಚಾಲಕರ ಎಚ್ಚರಿಕೆಯ ಕೊರತೆ ಇಂತಹ ಘಟನೆಗಳಿಗೆ ಕಾರಣವಾಗುತ್ತಿರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ.