ಬೆಂಗಳೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿಚಾರಣೆ ನಡೆಸಿದ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಇದೀಗ ಎಂಎಲ್ಸಿ ಸೂರಜ್ ರೇವಣ್ಣಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 23 ರಂದು ಸೂರಜ್ ರೇವಣ್ಣ ಬಂಧನವಾಗಿತ್ತು. 29 ದಿನಗಳ ಕಾಲ ಸೂರಜ್ ರೇವಣ್ಣ ಜೈಲಿನಲ್ಲಿದ್ದರು. ಷರತ್ತುಬದ್ದ ಜಾಮೀನು ಮಂಜೂರು ಮಾಡಿರುವ ಕೋರ್ಟ್, ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು.
ಪ್ರತಿ ತಿಂಗಳ 2ನೇ ಭಾನುವಾರ ತನಿಖೆಗೆ ಹಾಜರಾಗಬೇಕು. ಸಂತಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು ಎಂದು ಷರತ್ತು ವಿಧಿಸಿದೆ.