ಹಾಸನ: ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವಣಗೂರು ಬಳಿ ಅನಾರೋಗ್ಯದಿಂದ ನರಳುತ್ತಿದ್ದ ಇಪ್ಪತ್ತು ವರ್ಷದ ಹೆಣ್ಣಾನೆ ಮೃತಪಟ್ಟಿದೆ.
ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆಯನ್ನು ಚಿಕಿತ್ಸೆಗಾಗಿ ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ ಸಂಭವವಿದ್ದರಿಂದ ಅರಣ್ಯಾಧಿಕಾರಿಗಳು ಇಂದು ಆನೆಯಿದ್ದ ಸ್ಥಳದಲ್ಲೇ ಚಿಕಿತ್ಸೆ ಕೊಡಿಸಲು ಮುಂದಾಗಿದ್ದರು.
ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಹೆಣ್ಣಾನೆ, ಅನಾರೋಗ್ಯದ ಕಾರಣದಿಂದ ಆಹಾರ ತ್ಯಜಿಸಿ ನರಳುತ್ತಿತ್ತು. ಇಂದು ಅರಣ್ಯಾಧಿಕಾರಿಗಳು ವೈದ್ಯರೊಂದಿಗೆ ಸ್ಥಳಕ್ಕೆ ತೆರಳಿದಾಗ ಆನೆ ಮೃತಪಟ್ಟಿತ್ತು.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯ ಇಲಾಖೆ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲಿದೆ.