ಹಾಸನ : ತನ್ನ ಆಕ್ರಮಣಕಾರಿ ಪ್ರವೃತ್ತಿಯಿಂದ ಮಲೆನಾಡಿನ ರೈತರನ್ನು ಜೀವಭಯದಲ್ಲಿರಿಸಿರುವ ಕಾಡಾನೆ ‘ಕರಡಿ’ ಕೂಲಿ ಕೆಲಸಗಾರನ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಆತ ಪರಾಗಿದ್ದು, ದಾಳಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸರೆಯಾಗಿದೆ.
ಸಕಲೇಶಪುರ ತಾಲ್ಲೂಕಿನ, ಕೆಸಗುಲಿ ಗ್ರಾಮದ ಪಿಂಟು ಎಸ್ಟೇಟ್‌ನ ಅಡಿಕೆ ತೋಟದಲ್ಲಿ ಘಟನೆ ನಡೆದಿದೆ.
ಕೆಲಸ ಮಾಡುತ್ತಿದ್ದ ಇಬ್ಬರು ಕೂಲಿ ಕಾರ್ಮಿಕರ ಗಮನಕ್ಕೆ ಬಾರದಂತೆ ಸಮೀಪಿಸಿದ ಕರಡಿ ಏಕಾಏಕಿ ದಾಳಿ ನಡೆದಿದೆ. ತಕ್ಷಣ ಎಚ್ಚೆತ್ತ ಕೆಲಸಗಾರರು ಎಚ್ಚೆತ್ತು ಓಡಿದ್ದಾರೆ. ಅವರಲ್ಲಿ ಒಬ್ಬನ ಬೆನ್ನು ಹತ್ತಿದ ಆನೆ ಬೀಸಿದ ಸೊಂಡಲಿನಿಂದ ಒಬ್ಬಾತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.
ನಂತರ ಇನ್ನೊಬ್ಬನ ಮೇಲೆ ದಾಳಿ ಮಾಡಿದ ಕರಡಿ ಅವರನ್ನು ಅಟ್ಟಿಸಿಕೊಂಡು ಹೋಗಿದೆ. ಆತ ಓಡಿ ಮನೆಯೊಳಗೆ ಹೋಗಿ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ, ಆದರೆ ಮನೆಗೆ ಬೀಗ ಹಾಕಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗೆ ಹೋಗಿ ಮಲಗಿದ ಪಾರಾಗಿದ್ದಾನೆ.
ಇದೇ ಆನೆ ಜ.4 ರಂದು ಬೇಲೂರು ತಾಲ್ಲೂಕಿನ, ಮತ್ತಾವರದಲ್ಲಿ ವಂಸತ್ ಎಂಬುವವರನ್ನು ಬಲಿ ಪಡೆದಿತ್ತು. ಅಲ್ಲದೆ ಕಳೆದ ಹದಿನೈದು ದಿನಗಳ ಹಿಂದೆ ಹೆಬ್ಬನಹಳ್ಳಿಯಲ್ಲಿ ಮೂವರ ಮೇಲೆ ದಾಳಿ ಮಾಡಿತ್ತು.