ಹಾಸನ, ಫೆಬ್ರವರಿ 13: ಬೇಲೂರು ತಾಲ್ಲೂಕಿನ ಬೆಳ್ಳಾವರ ಗ್ರಾಮದಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಮೃತರನ್ನು ಕನಗುಪ್ಪೆ ಗ್ರಾಮದ ದ್ಯಾವಮ್ಮ (60) ಎಂದು ಗುರುತಿಸಲಾಗಿದೆ.
ದ್ಯಾವಮ್ಮ ಅವರು ಇಂದು ಬೆಳಿಗ್ಗೆ ಜಾನುವಾರುಗಳನ್ನು ಹುಡುಕಲು ಹೋಗಿದ್ದು, ಬಳಿಕ ಮರಳಿಲ್ಲ. ಕುಟುಂಬಸ್ಥರು ಹುಡುಕಾಟ ನಡೆಸಿದ ವೇಳೆ, ಅವರು ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದ್ಯಾವಮ್ಮ ಶವ ಮನೆಯ ಸಮೀಪವೇ ಬಿದ್ದಿದ್ದು, ಇದಕ್ಕೆ ಕಾಡಾನೆ ದಾಳಿಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅರೇಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಕಾಡಾನೆ ದಾಳಿಗೆ ಬಲಿಯಾದರಾ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.