ಹಾಸನ: ಸಂಸದ ಪ್ರಜ್ವಲ್ ವಿರುದ್ದದ ಲೈಂಗಿಕ ಹಗರಣ ಸಂಬಂಧ ಸಂತ್ರಸ್ತೆಯೊಬ್ಬರು ಅಪಹರಣವಾಗಿದ್ದಾರೆ ಎಂದು ಆರೋಪಿಸಿ ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ಗುರುವಾರ ದೂರು ದಾಖಲಿಸಿದ್ದಾರೆ.
ಈ ದೂರಿನ ಮೇರೆಗೆ ಸಂಸದರ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ತಡರಾತ್ರಿ ಎಫ್‌ಐಆರ್ ದಾಖಲಾಗಿದೆ. ಮೈಸೂರು ಹೆಚ್ಚುವರಿ ಪೊಲೀಸ್ ಆಯುಕ್ತ ನಂದಿನಿ ಠಾಣೆಗೆ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ.
ಪೆನ್ ಡ್ರೈವ್ ವಿವಾದದಲ್ಲಿ ತನ್ನ ತಾಯಿಯ ಚಿತ್ರವೂ ಇದೆ. ವಿಡಿಯೋ ಬಹಿರಂಗ ಬಳಿಕ ಸತೀಶ್ ಬಾಬು ಎಂಬವರು ರೇವಣ್ಣ ಕರೆಯುತ್ತಿದ್ದಾರೆ ಎಂದು ಅವರನ್ನು ಕರೆದೊಯ್ದರು. ಆಗಿನಿಂದ ಅವರು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ದೂರಿನನ್ವಯ ರೇವಣ್ಣ ಸಂಬಂಧಿ ಸತೀಶ್ ಬಾಬು ಹಾಗೂ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ.