ಹಾಸನ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವಿಗೀಡಾಗಿ, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯೊಂಡಿರುವ ಘಟನೆ ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್‌ನಲ್ಲಿ ನಡೆದಿದೆ.
ಅಭಿಷೇಕ್ (25) ಮೃತ ಯುವಕ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಅಪಘಾತದ ನಂತರ ಗಾಯಾಳುಗಳು ಅಪ್ಪಚ್ಚಿಯಾದ ಆಟೋದಲ್ಲಿ ಸಿಲುಕಿ ನರಳಾಡಿದರು. ಸ್ಥಳೀಯರು ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಕಳುಹಿಸಿದರು.
ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.