ಹಾಸನ: ಹಳೇ ದ್ವೇಷ ಹಿನ್ನೆಲೆಯಲ್ಲಿ ವೃದ್ಧರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಕಲಗೂಡು ತಾಲ್ಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಿರ್ವಾಣಪ್ಪ (70) ಕೊಲೆಯಾದ ವೃದ್ಧ. ಮಾರಕಾಸ್ತ್ರಗಳಿಂದ ವೃದ್ಧನ ಹತ್ಯೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿರೋಧಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಅರಕಲಗೂಡು ಠಾಣೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.