ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಹೇಮಾವತಿ ಜಲಾಶಯದ ಹಿನ್ನೀರು ಪಾಲಾದ ಘಟನೆ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಹಾಸನದ ರಾಜೀವ್ ಕಾಲೇಜ್‌ನ ಪ್ರರ್ಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ, ಬೇಲೂರು ಮೂಲದ ಗಿರೀಶ್ (20) ಮೃತಪಟ್ಟ ಯುವಕ
ಕಾಲೇಜಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಆತ ಸರಿಯಾಗಿ ಈಜು ಬಾರದದಿದ್ದರೂ ಆಳವಿರುವ ಪ್ರದೇಶದಲ್ಲಿ ನೀರಿಗೆ ಇಳಿದಿದ್ದ.
ಅಗ್ನಿಶಾಮಕದಳ ಹಾಗೂ ಪೊಲೀಸ್ ಸಿಬ್ಬಂದಿ ಗಿರೀಶ್ ಶವ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.