ಸಂಸದ ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಯ್ತು ಎಫ್.ಐ.ಆರ್!

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ರ ಅಡಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು ಶೀಘ್ರವೇ ತನಿಖಾ ತಂಡ ಪ್ರಜ್ವಲ್ ಅವರ ಹುಡುಕಾಟಕ್ಕೆ ಮುಂದಾಗಲಿದೆ ಎನ್ನಲಾಗುತ್ತಿದೆ