ಹಾಸನ : ಅರಕಲಗೂಡು ತಾಲ್ಲೂಕಿನ ಪ್ರಭಾವಿ ಮುಖಂಡ ಹಾಗೂ ಸಮಾಜ ಸೇವಕ ಎಂ.ಟಿ.ಕೃಷ್ಣೇಗೌಡ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದ ಕೃಷ್ಣೇಗೌಡ ಅರಕಲಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಬಂಡಾಯವಾಗಿ ಸ್ಪರ್ಧಿಸಿದ್ದರು.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ 55,038 ಮತ ಪಡೆಯುವ ಮೂಲಕ ಎರಡನೇ ಸ್ಥಾನಕ್ಕೇರಿದ್ದ ಕೃಷ್ಣೇಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೀಧರ್ ಗೌಡ ಅವರನ್ನು ಮೂರನೇ ಸ್ಥಾನಕ್ಕೆ ಇಳಿಯುವಂತೆ ಮಾಡಿದ್ದರು.
ಪಕ್ಷದ ಶಿಸ್ತು ಉಲ್ಲಂಘಿಸಿದ್ದರಿಂದ ಚುನಾವಣೆ ಸಂದರ್ಭದಲ್ಲೇ ಕೃಷ್ಣೇಗೌಡ ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟನೆ ಮಾಡಲಾಗಿತ್ತು.
ಈಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮತಗಳಿಕೆಗೆ ಅನುಕೂಲ ಆಗಲಿದೆ ಎಂಬ ಲೆಕ್ಕಾಚಾರದಲ್ಲಿ ಕೈ ನಾಯಕರು ಕೃಷ್ಣೇಗೌಡ ಅವರನ್ನು ಮರಳಿ ಪಕ್ಷಕ್ಕೆ ಸೆಳೆದಿದ್ದಾರೆ.