ವೃದ್ದೆಯನ್ನು ಸೊಂಡಿಲಿನಲ್ಲಿ ಎತ್ತಿ ಎಸೆದ ಕಾಡಾನೆ: ಗಾಯಾಳು ಆಸ್ಪತ್ರೆಗೆ ದಾಖಲು

ಸಕಲೇಶಪುರ : ಕಾಡಾನೆ ದಾಳಿಯಿಂದ ವೃದ್ದೆ ಒಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಉದೇವಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಸಗುಲಿ ಗ್ರಾಮದ ಪುಟ್ಟ ಸ್ವಾಮಿ ಗೌಡ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದ ದ್ರಾಕ್ಷಾಯಿಣಿ (60) ವರ್ಷ ಗಾಯಗೊಂಡಿದ್ದು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಉಪ ವಲಯ ಅರಣ್ಯಧಿಕಾರಿಗಳಾದ ಮಹದೇವ್, ದಿನೇಶ್ ಹಾಸನದ ಆಸ್ಪತ್ರೆಗೆ ಭೇಟಿ ನೀಡಿ ವೃದ್ದೆಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.