ಹಾಸನ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ವಾಹನ ಅಪಘಾತವಾದ ಕಿತ್ತಾನೆ ಗಡಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಬೈಕ್ ಗೆ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಸಾತೇನಹಳ್ಳಿ ಗ್ರಾಮದ ಮಂಜೇಗೌಡ (60) ಮೃತ ಬೈಕ್ ಸವಾರ. ತಮ್ಮ ಗ್ರಾಮದಿಂದ ಬಂದು ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಗೊರೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಪಘಾತಕ್ಕೀಡಾದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಹದಿನೈದು ದಿನಗಳ ಹಿಂದೆ ಇದೇ ಸ್ಥಳದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರ ವಾಹನ ಅಪಘಾತಕ್ಕೀಡಾಗಿ ಅವರು ಪ್ರಾಣ ಕಳೆದುಕೊಂಡಿದ್ದನ್ನು ಸ್ಮರಿಸಬಹುದು.