ಹಾಸನ: ಶಂಕಿತ ಡೆಂಗ್ಯೂ ಸೋಂಕಿಗೆ ಜಿಲ್ಲೆಯಲ್ಲಿ ಸೋಮವಾರ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ.
ಅರಸೀಕೆರೆ ತಾಲ್ಲೂಕಿನ ಮಾಡಾಳು ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್ (9) ಸಾವನ್ನಪ್ಪಿದ ಬಾಲಕ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಜೇಶ್ ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದನು.
ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತನ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಹಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಆತ ಮೃತಪಟ್ಟಿದ್ದಾನೆ.