ಮೂಡಲಹಿಪ್ಪೆಯಿಂದ ಪ್ರಚಾರ ಆರಂಭಿಸಿದ ಪಡುವಲಹಿಪ್ಪೆ‌ ಮೊಮ್ಮಗ ಪ್ರಜ್ವಲ್ ರೇವಣ್ಣ

ರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ನಂತರ ಅಬ್ಬರದ ಪ್ರಚಾರ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ಸಂಪ್ರದಾಯದಂತೆ ಶುಕ್ರವಾರ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮೂಡಲಹಿಪ್ಪೆಯಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಿದರು.

ಕುಟುಂಬ ಸಮೇತವಾಗಿ ಮೂಡಲಹಿಪ್ಪೆ ಗ್ರಾಮದ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಿದರು.

ಮಾಜಿ ಸಚಿವ ರೇವಣ್ಣ, ಭವಾನಿ ರೇವಣ್ಣ, ಡಾ.ಸೂರಜ್ ರೇವಣ್ಣ ಪೂಜೆಯಲ್ಲಿ ಪಾಲ್ಗೊಂಡರು. ನಂತರ ತಾಲ್ಲೂಕಿನ ವಿವಿಧೆಡೆ ತೆರೆದ ವಾಹನದಲ್ಲಿ ಪ್ರಚಾರ ಕೈಗೊಂಡರು.