ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಗೆ ಅಪೆ ಆಟೋ ಡಿಕ್ಕಿ; ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯ

ಹಾಸನ: ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯಲೆನ್ಸ್ ಹಾಗೂ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಪೆ ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ ನಾಲ್ವರು ಗ‌ಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ75ರ ಚನ್ನರಾಯಪಟ್ಟಣ ಬೈಪಾಸ್ ನಲ್ಲಿ ನಡೆದಿದೆ.

ಗಾಯಾಳುಗಳನ್ನು ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಾರ್ಮಿಕರೆಲ್ಲರೂ ಸ್ಥಳೀಯರು ಎನ್ನಲಾಗಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಮೃತದೇಹ ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಚನ್ನರಾಯಪಟ್ಟಣದಿಂದ ಬಾಗೂರು ಕಡೆಗೆ ಶುಂಠಿ ಕೀಳಲು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಪೆ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆ ನಂತರ ಅಂಬ್ಯುಲೆನ್ಸ್‌ನಲ್ಲಿದ್ದ ಮೃತದೇಹವನ್ನು ಮತ್ತೊಂದು ಅಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಕಳಿಸುವ ವ್ಯವಸ್ಥೆ ಮಾಡಲಾಯಿತು.

ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.