ಹಾಸನ : ನಗರದ ಅಂಗವಿಕಲ ಕ್ರೀಡಾಪಟು ಎಸ್.ಡಿ.ಕಮಲಾಕ್ಷಿ ಅವರು 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದಾರೆ.
ವಾಲಿಬಾಲ್ ಹಾಗೂ ಪ್ಯಾರಾ ಬ್ಯಾಡಿಂಟನ್ ಆಟಗಳಲ್ಲಿ ಗುರುತಿಸಿಕೊಂಡಿರುವ ಕಮಲಾಕ್ಷಿ ಅವರು ಕ್ರೀಡಾ ಕ್ಷೇತ್ರದಲ್ಲಿ ಅಮೋಘ ಸಾಧನೆ ಮೆರೆದಿದ್ದಾರೆ. ರಾಜ್ಯ ಹಾಗು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಅಂಗವೈಕಲ್ಯತೆಗೆ ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿಯ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿರುವ ಅವರಿಗೆ ರಾಷ್ಟ್ರೀಯ ಪ್ಯಾರಾ ಬ್ಯಾಡಿಂಟನ್ ಹಾಗು ಸಿಟ್ಟಿಂಗ್ ವಾಲಿಬಾಲ್ ಪಂದ್ಯದಲ್ಲಿ ಪ್ರಶಸ್ತಿಗಳು ದೊರೆತಿವೆ. ಖೇಲೋ ಇಂಡಿಯಾ, ಕಜಕಿಸ್ತಾನ ಪ್ಯಾರಾ ವ್ಯಾಲಿ ಫೆಡರೇಷನ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.
2024ರ ಜುಲೈನಲ್ಲಿ ಬೆಂಗಳೂರಿನಲ್ಲಿ ನಡೆದ ಸುಮಧುರ ಕಪ್-ವ್ಹೀಲ್‌ಚೇರ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದ ನಾಯಕಿಯಾಗಿ ಪ್ರತಿಭೆ ಮೆರೆದಿದ್ದಾರೆ.