ಎಂಪಿ ಚುನಾವಣೆ ಕೈ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಸೇರಿದ ಜತ್ತೇನಹಳ್ಳಿ ರಾಮಚಂದ್ರ; ಪ್ರಮುಖರ ಸಭೆ ನಡೆಸಿ ಸಹಕಾರ ಕೋರಿದ ಮುಖಂಡ

ಹಾಸನ: ಲೋಕಸಭೆ ಚುನಾವಣೆಗೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚಟುವಟಿಕೆ ಬಿರುಸುಗೊಂಡಿದ್ದು, ಆಕಾಂಕ್ಷಿಗಳು ಜಿಲ್ಲಾ ಮುಖಂಡರು, ಹಿರಿಯರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದು ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.
ಕಳೆದ ತಿಂಗಳು ಬಾಗೂರು ಮಂಜೇಗೌಡ ಅವರು ತಮ್ಮ ತೋಟದಲ್ಲಿ ಆಪ್ತರು, ಬೆಂಬಲಿಗರ ಸಭೆ ನಡೆಸಿದ್ದರು. ಇಂದು ಚನ್ನರಾಯಪಟ್ಟಣದ ಪ್ರಭಾವಿ ಕಾಂಗ್ರೆಸ್ ಮುಖಂಡ ಜತ್ತೇನಹಳ್ಳಿ ರಾಮಚಂದ್ರ ಅವರು ಹಾಸನದಲ್ಲಿ ಪ್ರಮುಖ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ನಾನೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷ ಅವಕಾಶ ಮಾಡಿಕೊಟ್ಟರೆ ಸ್ಪರ್ಧೆ ಮಾಡುವೆ, ಇದಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದು ಕೋರಿದರು.
ಇದೇ ರೀತಿ ಎಲ್ಲಾ ತಾಲೂಕುಗಳಲ್ಲೂ ಪ್ರಮುಖ ಸಭೆ ನಡೆಸಿ ಅಭಿಪ್ರಾಯ ಕಲೆ ಹಾಕಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲು ಅವರು ನಿರ್ಧರಿಸಿದ್ದಾರೆ.
ಇಂದಿನ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷö್ಮಣ್, ಮಾಜಿ ಸಚಿವ ಬಿ.ಶಿವರಾಂ, ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಮುಖಂಡರಾದ ಹೆಚ್.ಕೆ.ಮಹೇಶ್, ಬನವಾಸೆ ರಂಗಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ತಾರಾಚಂದನ್, ಹೊನ್ನವಳ್ಳಿ ಗಣೇಶ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಿಗೆವಾಳು ದ್ಯಾವಪ್ಪ ಮೊದಲಾದವರಿದ್ದರು.
ಲೋಕಸಭಾ ಚುನಾವಣೆಗೆ ಜಿಲ್ಲಾ ಕಾಂಗ್ರೆಸ್‌ನಿAದ ಮಾಜಿ ಸಚಿವ ಬಿ.ಶಿವರಾಂ, ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ, ಮುಖಂಡರಾದ ಬಾಗೂರು ಮಂಜೇಗೌಡ, ಶ್ರೇಯಸ್ ಪಟೇಲ್ ಹಾಗೂ ಜತ್ತೇನಹಳ್ಳಿ ರಾಮಚಂದ್ರ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.