ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್, ದೀಪಾ ಭಾಸ್ಕಿ ಅವರಿಗೆ ನಾಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನ

ಬೆಂಗಳೂರು: ಪ್ರಸಕ್ತ ಸಾಲಿನ ಬುಕರ್ ಅಂತಾರಾಷ್ಟ್ರೀಯ ಪ್ರಶಸ್ತಿ ಗೆದ್ದು ತವರಿಗೆ ಹಿಂದಿರುಗುತ್ತಿರುವ ಪತ್ರಕರ್ತರೂ ಆದ ಖ್ಯಾತ ಲೇಖಕಿಯರಾದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ಕಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಗಾಂಧಿ ಭವನದಲ್ಲಿ ಬುಧವಾರ ಸಂಜೆ 4 ಗಂಟೆಗೆ ಸನ್ಮಾನಿಸಲಾಗುವುದು.

ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರನ್ನು ಅಭಿನಂದಿಸಿ ಬರಮಾಡಿಕೊಳ್ಳಲಾಗುವುದು. ನಂತರ ನೇರವಾಗಿ ಗಾಂಧಿ ಭವನಕ್ಕೆ ಅವರು ಆಗಮಿಸಲಿದ್ದಾರೆ.

ಇಬ್ಬರೂ ಲೇಖಕಿಯರು ಬುಕರ್ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಹಾಗೂ ಮಾಧ್ಯಮ ಕ್ಷೇತ್ರದಲ್ಲಿರುವ ಸಲ್ಲಿಸಿರುವ ಸೇವೆಗಾಗಿ ಅವರನ್ನು ಸನ್ಮಾನಿಸಲಾಗುವುದು. ಎಲ್ಲ ಪತ್ರಕರ್ತರೂ ಸಮಾರಂಭದಲ್ಲಿ ಭಾಗಿಯಾಗಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕೋರಿದ್ದಾರೆ.