ಹಾಸನ: ಆಲೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಸವರಾಜು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವ್ಯಕ್ತಿಯೊಬ್ಬರಿಗೆ ಕೈಗಾರಿಕೆ ಇ-ಖಾತೆ ಮಾಡುವ ಸಲುವಾಗಿ ಎರಡು ಲಕ್ಷ ರೂಪಾಯಿ ಲಂಚ ಕೇಳಿದ್ದ ಅವರು, ಮೊದಲ ಕಂತಿನಲ್ಲಿ 1.30ಲಕ್ಷ ರೂ. ವಸೂಲಿ ಮಾಡಿದ್ದರು. ಇಂದು 70,000 ರೂಪಾಯಿ ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದೆ.
ಈ ದಾಳಿಯನ್ನು ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು ಮತ್ತು ಶಿಲ್ಪಾ ನೇತೃತ್ವದಲ್ಲಿ ನಡೆಸಲಾಯಿತು. ಅಧಿಕಾರಿಗಳು ಬಸವರಾಜು ಅವರಿಂದ ಲಂಚದ ಹಣವನ್ನು ವಶಪಡಿಸಿಕೊಂಡು, ಮುಂದಿನ ತನಿಖೆಯನ್ನು ಪ್ರಾರಂಭಿಸಿದ್ದಾರೆ.