ಬೇಲೂರು: ತಾಲ್ಲೂಕಿನಲ್ಲಿ ಮಳೆಯ ಆರ್ಭಟಕ್ಕೆ ಸುಳ್ಳಕ್ಕಿ ಗ್ರಾಮದಲ್ಲಿ ರಸ್ತೆ ಕೊಚ್ಚಿ ಹೋಗಿ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಹ ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸುಳ್ಳಕ್ಕಿ-ಮೈಲಹಳ್ಳಿ-ಆಲೂರು-ಬೇಲೂರು-ಕೋನೇರ್ಲು ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನೂರಾರು ಎಕರೆಯಲ್ಲಿ ನಾಟಿ ಮಾಡಿದ್ದ ಭತ್ತದ ಸಸಿಗಳಿ ಕೊಚ್ಚಿ ಹೋಗಿವೆ.
ಇತ್ತೀಚೆಗಷ್ಟೇ ನಿರ್ಮಾಣ ಮಾಡಿದ್ದ ರಸ್ತೆ ಕೊಚ್ಚಿ ಹೋಗಿದೆ. ಸೇತುವೆ ಜಲಾವೃತಗೊಂಡಿದೆ. ಬದಲಿ ರಸ್ತೆಯಲ್ಲಿರುವ ಕಾಲು ದಾರಿಯಲ್ಲಿ ಹರಿಯುವ ನೀರಿನಲ್ಲಿ ಗ್ರಾಮಸ್ಥರು ಓಡಾಡುತ್ತಿದ್ದಾರೆ.