ಹಾಸನ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಪ್ರತಿಕ್ರಿಯಿಸಿದ್ದಾರೆ.
ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರೂ ಆಗಿದ್ದಾರೆ. ಎಲ್ಲ ಪಕ್ಷಗಳ ನಾಯಕರು ಹೀಗೆ ಹೇಳೋದು ಸಹಜ, ನಾವೂ ಹೇಳುತ್ತೇವೆ, ಜನತಾದಳದವರೂ ಹೇಳುತ್ತಾರೆ, ಆದರೆ ಚುನಾವಣೆ ಸಂದರ್ಭದಲ್ಲಿ ಜನರ ವಿಶ್ವಾಸ ಯಾರಿಗೆ ಇರುತ್ತೋ ಅವರು ಗೆಲ್ಲುತ್ತಾರೆ ಎಂದರು.
ಆದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಏಳೂ ಸ್ಥಾನ ಗೆಲ್ಲಲಿದೆ. ಹಾಗೆಯೇ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಪ್ರೀತಂ ವಿಶ್ವಾಸ ವ್ಯಕ್ತಪಡಿಸಿದರು. 136 ಸ್ಥಾನ ಗೆದ್ದಾಗಲೇ ಹಾಸನದಲ್ಲಿ ಕಾಂಗ್ರೆಸ್ ಗೆದ್ದಿದ್ದು 1 ಸ್ಥಾನ ಎಂದು ಟಾಂಗ್ ನೀಡಿದರು.