ಪಾಕಿಸ್ತಾನ ಪರ ಘೋಷಣೆ ಆರೋಪ; FSL ವರದಿ ಬಂದ ತಕ್ಷಣ ಬಹಿರಂಗ; ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷಕ್ಕೆ ದೇಶ ಭಕ್ತಿ ಹೇಳಿ ಕೊಡಬೇಕಾ? ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಯಾರು?

ಹಾಸನ: ನಮಗೆ ಬಿಜೆಪಿಯವರು ದೇಶಭಕ್ತಿ ಹೇಳಿಕೊಡಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಹಾಸನ ಹೊರವಲಯದ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ದೇಶ ಭಕ್ತಿ ಹೇಳಿ ಕೊಡಬೇಕಾ? ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಯಾರು? ಎಂದು ಪ್ರಶ್ನಿಸಿದರು.

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟಣೆ ನಂತರ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಸಂಬಂಧಿತ ವಿಡಿಯೋ ಎಫ್.ಎಸ್‌.ಎಲ್. ವರದಿ ಬಹಿರಂಗಪಡಿಸಬೇಕು ಎಂಬ ಪ್ರತಿಕ್ಷ ನಾಯಕರ ಆಗ್ರಹ ಕುರಿತು ಪ್ರತಿಕ್ರಿಯಿಸಿದ ಅವರು, ವರದಿ ಬಂದ ಕೂಡಲೇ ಬಹಿರಂಗ ಮಾಡುತ್ತೇವೆ ಎಂದರು.

ಯಾರೇ ಆದರೂ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಬಗ್ಗೆ ನಿಷ್ಠೆ ಹೊಂದಿದ್ದರೆ ಅಂತಹವರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬಿಜೆಪಿಯವರು ರಾಜಕೀಯಕ್ಕೋಸ್ಕರ ಏನೋ ಹೇಳ್ತಾರೆ, ಅದು ಬೇರೆ ವಿಚಾರ, ಅವರು ಏನಾದರೂ ಆ ತರ ಕೂಗಿದ್ರೆ ಕಠಿಣವಾದ ಕ್ರಮ ತೆಗೆದುಕೊಳ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಮ್ಮ ಪಕ್ಷದ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ತಕ್ಷಣ ಬಿಡುಗಡೆ ಮಾಡುತ್ತೇವೆ. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಷ್ಟೊಂದು ಗೊಂದಲ ಇಲ್ಲ. ಹಾಸನದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಕ್ಯಾಂಡೇಟ್ ಮಾಡಲು ಸಮಸ್ಯೆ ಏನೂ ಇಲ್ಲ ಎಂದರು.