ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಗರದ ಅಧಿದೇವತೆ ಹಾಸನಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಹೆಲಿಕಾಪ್ಟರ್ ಮೂಲಕ ನಗರಕ್ಕೆ ಆಗಮಿಸಿದ ಅವರನ್ನು ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಚಾಮರ ಹಿಡಿದು ಮಂಗಳವಾದ್ಯಗಳೊಂದಿಗೆ ಹಾಸನಾಂಬೆ ದೇವಿ ದರ್ಶನಕ್ಕೆ ಕರೆದೊಯ್ದರು.

ಕಳೆದ ವರ್ಷ ನ.7 ರಂದು ಹಾಸನಾಂಬೆ ದೇವಿ ದರ್ಶನ ಪಡೆದಿದ್ದ ಸಿಎಂ ಸಿದ್ದರಾಮಯ್ಯ ಇಂದು ಎರಡನೇ ಬಾರಿಗೆ ಹಾಸನಾಂಬೆ ದೇವಿ ದರ್ಶನ ಪಡೆದರು. ಗರ್ಭಗುಡಿಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.

ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸದ ಶ್ರೇಯಸ್‌ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ ಸಾಥ್ ನೀಡಿದರು. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಡಿಸಿ ಸತ್ಯಭಾಮ, ಎಸ್ಪಿ ಮಹಮದ್ ಸುಜೀತಾ, ಆಡಳತಾಧಿಕಾರಿ ಮಾರುತಿ ಉಪಸ್ಥಿತರಿದ್ದರು.