ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನ ಖಂಡಿಸಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾಕಾರರು ಎನ್.ಆರ್. ವೃತ್ತದಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು, ದಹಿಸಿ ಡಿಕೆಶಿ, ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು
ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಡಿಸಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಮನವಿ ಸ್ವೀಕರಿಸಿದ ನಂತರ ಪ್ರತಿಭಟನಾಕಾರರು ಡಿಸಿ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.