ರೇವಣ್ಣ ಬಂಧನ ಖಂಡಿಸಿ ಹೊಳೆನರಸೀಪುರದಲ್ಲಿ ಪ್ರತಿಭಟನೆ

ಹೊಳೆನರಸೀಪುರದಲ್ಲಿ ಪೊಲೀಸ್ ಬಿಗಿಭದ್ರತೆ

ಹಾಸನ : ಎಸ್‌ಐಟಿಯಿಂದ ಮಾಜಿಸಚಿವ ಎಚ್.ಡಿ.ರೇವಣ್ಣ ಬಂಧನ ಖಂಡಿಸಿ ಹೊಳೆನರಸೀಪುರದಲ್ಲಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದ ಗಾಂಧಿ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು ಹಾಗೂ ಎಚ್.ಡಿ.ರೇವಣ್ಣ ಅಭಿಮಾನಿಗಳು ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಪ್ರವೀಣ್‌ಕುಮಾರ್‌ಗೆ ಮನವಿ ಸಲ್ಲಿಸಿದರು.

ಎಚ್.ಡಿ‌.ರೇವಣ್ಣ ಬಂಧನವಾಗಿದ್ದು ಪಟ್ಟಣದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಕೋರಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆನರಸೀಪುರ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೀತಾ
ಹೊಳೆನರಸೀಪುರದಲ್ಲಿ ಮೊಕ್ಕಾಂ ಹೂಡಿದ್ದಾರೆ.