ಹಾಸನ: ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಇಂದು ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಆರನೇ ಮತ್ತು ಏಳನೇ ಆರೋಪಿಯಾಗಿರುವ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ.12 ರಂದು ಬಂಧಿಸಿತ್ತು. ಬಂಧನದ ಹದಿನೆಂಟು ದಿನಗಳ ಬಳಿಕ ಅವರಿಗೆ ಜಾಮೀನು ಮಂಜೂರಾಗಿದೆ.
ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿರುವ ಚೇತನ್ ಹಾಗೂ ಲಿಖಿತ್‌ಗೌಡ ಇಂದು ಸಂಜೆ ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.