ಹಾಸನ: ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಲೂರು ತಾಲೂಕು ಬ್ಯಾಡರಹಳ್ಳಿಯಲ್ಲಿ ಆಯೋಜಿಸಿರುವ ಪ್ರಥಮ ವರ್ಷದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಚಾಲನೆ ನೀಡಿದರು.
ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ, ಸಕಲೇಶಪುರ ಉಪವಿಭಾಗಾಧಿಕಾರಿ ಶ್ರುತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ವೇಣುಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಸಿ.ಶಶಿಧರ್, ರಾಜ್ಯ ಸಮಿತಿ ಸದಸ್ಯ ಎಚ್.ಬಿ.ಮದನಗೌಡ, ವಿಶೇಷ ಆಹ್ವಾನಿತ ರವಿನಾಕಲಗೂಡು, ರಾಷ್ಟ್ರೀಯ ಮಂಡಳಿ ಸದಸ್ಯ ಜಿ. ಪ್ರಕಾಶ್, ಮಾಜಿ ಅಧ್ಯಕ್ಷರಾದ ಕೆ.ಆರ್. ಮಂಜುನಾಥ್, ಬಿ.ಆರ್. ಉದಯಕುಮಾರ್, ಆಲೂರು ತಾಲೂಕು ಅಧ್ಯಕಕ್ಷ ಪೃಥ್ವಿ ಆಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ಕಣದಳ್ಳಿ ಮಂಜೇಗೌಡ, ಎಲ್ಲ ತಾಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.