ಸಕಲೇಶಪುರ: ಕಾಡಾನೆ ದಾಳಿಯಿಂದ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಟೇಹಳ್ಳಿ ಗ್ರಾಮದ ದಿವಾಕರ್ ಶೆಟ್ಟಿ (62) ಇಂದು ಮೃತಪಟ್ಟಿದ್ದಾರೆ.
ಕಳೆದ ಜೂನ್ 13ರಂದು ಕಾಡಾನೆ ತುಳಿದು ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಅವರನ್ನು ಶಾಸಕ ಸಿಮೆಂಟ್ ಮಂಜು ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರ ಅಂತ್ಯಕ್ರಿಯೆ ಇಂದು ಸಂಜೆ ಸ್ವಗ್ರಾಮ ವಾಟೇಹಳ್ಳಿಯಲ್ಲಿ ನಡೆಯಲಿದೆ. ದಿವಾಕರ್ ಶೆಟ್ಟಿ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಶಾಸಕ ಸಿಮೆಂಟ್ ಮಂಜು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.