ಹಾಸನ:ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾಗಿ ಡಾ.ಎಸ್.ವಿ.ಸಂತೋಷ್ ನೇಮಕಗೊಂಡಿದ್ದಾರೆ.
ಸಂಸ್ಥೆಯ ಹಾಲಿ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ಅವರ ಸೇವಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಡಿ.26ರಿಂದ ಡಾ.ಸಂತೋಷ್ ಅವರನ್ನು ಪ್ರಭಾರ ನಿರ್ದೇಶಕರಾಗಿ ನೇಮಕ ಮಾಡಿ ಶುಕ್ರವಾರ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಡಾ.ಎಸ್.ವಿ.ಸಂತೋಷ್, ಹಿಮ್ಸ್ ನಲ್ಲಿ ಹತ್ತು ವರ್ಷಗಳಿಂದ ಮನೋವೈಜ್ಞಾನಿಕ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಸಮಾಜಮುಖಿ ಸೇವೆಯಿಂದ ಸಾರ್ವಜನಿಕ ವಲಯದಲ್ಲಿ ಜನಪರ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ.
ಹಾಲಿ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ಅವರು ಸಂಸ್ಥೆಯ ಚರ್ಮರೋಗ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯಲು ಆದೇಶದಲ್ಲಿ ಸೂಚಿಸಲಾಗಿದೆ.