ಹಾಸನ: ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಆಕೆಯ ಪ್ರಿಯಕರನೇ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಹಾಸನ ತಾಲ್ಲೂಕಿನ, ಕುಂತಿಗುಡ್ಡದಲ್ಲಿ ಸುಚಿತ್ರಾ (20) ಶವ ದೊರಕಿದೆ. ಈಕೆ ಮೊಸಳೆ ಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ. ಪ್ರಕರಣದ ಆರೋಪಿ ಪ್ರಿಯಕರ ತೇಜಸ್ (23) ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಆಲೂರು ತಾಲ್ಲೂಕಿನ ಕವಳಗೆರೆ ಗ್ರಾಮದ ಸುಚಿತ್ರಾ ಅವರನ್ನು ಕುಂತಿಗುಡ್ಡಕ್ಕೆ ಕರೆದೊಯ್ದಿದ್ದ ಪ್ರಿಯಕರ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.