ಭೂಮಿ ಲಪಟಾಯಿಸಿದ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಖ್ಯಾತ ಗಾಯಕ ಲಕ್ಕಿ ಆಲಿ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರೋಹಿಣಿ, ಅವರ ಪತಿ ಸುಧೀರ್ ರೆಡ್ಡಿ, ಭಾಮೈದ ಮಧುಸೂಧನ್ ರೆಡ್ಡಿ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವ ಬಾಲಿವುಡ್ ನ ಖ್ಯಾತ ಗಾಯಕ ಲಕ್ಕಿ ಅಲಿ, ತಮಗೆ ಸಂಬಂಧಿಸಿದ ಭೂಮಿಯನ್ನು ಈ ಮೂವರೂ ಲಪಟಾಯಿಸಿದ್ದಾರೆಂದು ಆರೋಪಿಸಿದ್ದಾರೆ.

ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ರೋಹಣಿ, ಸಿಂಧೂರಿ ಹಾಗೂ ಮಧುಸೂಧನ್‌ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ರೋಹಿಣಿ ಸಿಂಧೂರಿ ಮತ್ತು ಇತರರು ಭೂ ಮಾಫಿಯಾದೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ, ಅವರ ಭೂಮಿಯನ್ನು ಅಕ್ರಮವಾಗಿ ಅತಿಕ್ರಮಿಸಲು ರಾಜ್ಯ ಸಂಪನ್ಮೂಲಗಳನ್ನು ಬಳಸಿದ್ದಾರೆ (ಟ್ರಸ್ಟ್ ಮಾಲೀಕತ್ವದ ಕೃಷಿ-ಭೂಮಿ) ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಲಕ್ಕಿ ಆಲಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ದೂರಿನ ಪ್ರತಿ

ದೂರಿನ ಪ್ರತಿಯನ್ನು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅಪ್ಲೋಡ್ ಮಾಡಿರುವ ಅವರು, ಅದರಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೆಯರ್ ಮನೋಹರ್ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.