ಬೇಲೂರು: ಆನೆ ದಾಳಿಗೆ ಮತ್ತೊಂದು ಬಲಿ- ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ತುಳಿದು ಕೊಂದ ಆನೆ

ಹಾಸನ: ಬೇಲೂರು ತಾಲ್ಲೂಕು ಬೊಮ್ಮೆನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ.ಗ್ರಾಮದ ಸುಶೀಲಮ್ಮ (47) ಮೃತರು.ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.

ಸುಶೀಲಮ್ಮ

ಸೊಂಡಿಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಎರಡು ತಿಂಗಳ ಅಂತರದಲ್ಲಿ ಕಾಡಾನೆ ದಾಳಿಯಿಂದ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.