ಪ್ರಜ್ವಲ್ ರೇವಣ್ಣ ವಾಪಸ್ಸಾತಿ ಬಗ್ಗೆ ಏನೂ ಗೊತ್ತಿಲ್ಲ ಎಂದ ರೇವಣ್ಣ

ಪುತ್ರ ಪ್ತಜ್ವಲ್ ಹೆಸರಿನಲ್ಲಿ ಅರ್ಚನೆ ಮಾಡಿಸಿದ ರೇವಣ್ಣ

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿಚಾರ ಏನೂ ಗೊತ್ತಿಲ್ಲ, ನಾನು ಯಾರ ಬಗ್ಗೆಯೂ ಮಾತನಾಡಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದರು.

ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ರೇವಣ್ಣ ವಿದೇಶದಿಂದ ಬರುವ ವಿಚಾರವಾಗಿ ಮಾತನಾಡಲು ನಿರಾಕರಿಸಿದ ಅವರು ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.

ಲೈಂಗಿಕ ದೌರ್ಜನ್ಯ ಪ್ರಕರಣ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಪರಿಣಾಮ ಬೀರುವ ಬಗ್ಗೆ ಕೇಳಿದ ಪ್ರಶ್ನೆಗೂ ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದರು.

ಇದಕ್ಕೂ ಮೊದಲು ಹೊಳೆನರಸೀಪುರದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಎಚ್.ಡಿ.ರೇವಣ್ಣ ವಿಶೇಷ ಪೂಜೆ ಸಲ್ಲಿಸಿ ಪ್ರಜ್ವಲ್‌ರೇವಣ್ಣ ಸೇರಿದಂತೆ ಕುಟುಂಬ ಸದಸ್ಯರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.