ಸಕಲೇಶಪುರ; ಪಟ್ಟಣದ ಪುರಸಭೆಯಲ್ಲಿ ಹಲವು ವರ್ಷಗಳ ಕಾಲ ಪೌರ ಕಾರ್ಮಿಕ ಆಗಿ ಸೇವೆ ಸಲ್ಲಿಸಿದ್ದ, ತಾಲ್ಲೂಕು ಆದಿದ್ರಾವಿಡ ಯುವಕರ ಅಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಡಿ. ಬನ್ನೇರಿ ಭಾನುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರ ಅಂತ್ಯ ಸಂಸ್ಕಾರ ಸೋಮವಾರ ಮಧ್ಯಾಹ್ನ 3ಕ್ಕೆ ಪಟ್ಟಣದಲ್ಲಿ ನಡೆಯಲಿದೆ. ಕುಶಾಲನಗರ ಬಡಾವಣೆಯ ಅಂಬೇಡ್ಕರ್ ಭವನದ ಹಿಂಭಾಗದ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.