ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಜ್ವಲ್‌ ರೇವಣ್ಣ ಹೆಸರು ಘೋಷಿಸಿದ ಎಚ್.ಡಿ.ದೇವೇಗೌಡ; ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದ ದಳಪತಿ

ಹಾಸನ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಜ್ವಲ್‌ರೇವಣ್ಣ ಅವರನ್ನು ಹಾಸನ ಲೋಕಸಭಾ ಅಭ್ಯರ್ಥಿ ಎಂದು ಘೋಷಿಸಿದರು.

ಹೊಳೆನರಸೀಪುರ ತಾಲ್ಲೂಕಿನ, ಶ್ರೀರಾಮದೇವರಕಟ್ಟೆಯಲ್ಲಿ ಮಾತನಾಡಿದ ಅವರು, 2019 ರಲ್ಲಿ ಪ್ರಜ್ವಲ್‌ರೇವಣ್ಣ ಅವರನ್ನು ಲೋಕಸಭೆ ಅಭ್ಯರ್ಥಿಯಾಗಿ ಶಾಸಕರು, ಮಾಜಿ ಶಾಸಕರು ಎಲ್ಲರೂ ತೀರ್ಮಾನ ಮಾಡಿದ್ರು ಅವರು ಒಂದು ಲಕ್ಷ ಲೀಡ್‌ನಲ್ಲಿ ಗೆದ್ದಿದ್ದಾರೆ. ಈಗ ಕಾಂಗ್ರೆಸ್, ಜೆಡಿಎಸ್‌ನಲ್ಲೂ ಒಬ್ಬರೇ ಲೋಕಸಭಾ ಸದಸ್ಯರಿದ್ದಾರೆ, ಕಾಂಗ್ರೆಸ್ ವಿರುದ್ಧವಾಗಿ ಬಿಜೆಪಿ-ಜೆಡಿಎಸ್ ಒಂದಾಗಿ ಲೋಕಸಭಾ ಚುನಾವಣೆ ಎದುರಿಸಲು ತೀರ್ಮಾನ ಮಾಡಿದ್ದೇವೆ.

ಪ್ರಜ್ವಲ್ ಸಿಟ್ಟಿಂಗ್ ಮೆಂಬರ್ ಇದ್ದಾರೆ, ಯುವಕರಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷ ಕುಮಾರಸ್ವಾಮಿ ಅವರು ಮೋದಿ, ಅಮಿತ್ ಶಾ ಜೊತೆ ಚರ್ಚೆ ಮಾಡುತ್ತಾರೆ. ಹಾಸನ ಅಭ್ಯರ್ಥಿ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ, ಒಬ್ಬರೇ ಸಿಟ್ಟಿಂಗ್ ಎಂಪಿ ಇರೋದು ಬೇರೆ ಯಾವ್ಯಾವ ಸೀಟ್ ಬಿಟ್ಟು ಕೊಡ್ತಾರೆ ನೋಡೋಣ ಎನ್ನುವ ಮೂಲಕ ಹಾಸನ ಲೋಕಸಭಾ ಕ್ಷೇತ್ರದ ಬಗೆಗಿದ್ದ ಕುತೂಹಲಗಳನ್ನು ಬದಿಗೆ ಸರಿಸಿದರು.